ಪಿಎಂ ಕಿಸಾನ್ ಯೋಜನೆಯ 12 ನೇ ಕಂತು ಅನ್ನು ಪಿಎಂ ಮೋದಿ ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ. ಕೇಂದ್ರ ಸರ್ಕಾರವು ನಡೆಸುತ್ತಿರುವ ಈ ಯೋಜನೆಯು ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ.
ಈ ಯೋಜನೆಯಡಿಯಲ್ಲಿ, ರೈತರಿಗೆ ವರ್ಷದ ಮೊದಲ ಕಂತನ್ನು ಏಪ್ರಿಲ್ 1 ರಿಂದ ಜುಲೈ 31 ರ ನಡುವೆ ನೀಡಲಾಗುತ್ತದೆ, ಅಂದರೆ, ಎರಡನೇ ಕಂತನ್ನು ಆಗಸ್ಟ್ 1 ರಿಂದ ನವೆಂಬರ್ 30 ರ ನಡುವೆ ನೀಡಲಾಗುತ್ತದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ನೀವು ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಅದನ್ನು ಶೀಘ್ರವಾಗಿ ಬಗೆಹರಿಸಿಕೊಳ್ಳಿ. ಇದಕ್ಕಾಗಿ, ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಅಥವಾ ಮೇಲ್ ಐಡಿಗೆ ಮೇಲ್ ಮಾಡುವ ಮೂಲಕ ನೀವು ಪರಿಹಾರವನ್ನು ಕಂಡುಕೊಳ್ಳಬಹುದು.