PM Kisan: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷ ಆರಂಭದ ಮೊದಲ ದಿನದಂದು 11 ನೇ ಕಂತಿನ 2000 ರೂಪಾಯಿಗಳನ್ನು ವರ್ಗಾಯಿಸಿದ್ದಾರೆ.
ಆದರೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 2022 ರಲ್ಲಿ ಸರ್ಕಾರವು ಮಹತ್ವದ ಬದಲಾವಣೆಯೊಂದನ್ನು ಮಾಡಿದೆ, ಇದು ದೇಶದ 12 ಕೋಟಿಗೂ ಹೆಚ್ಚು ನೋಂದಾಯಿತ ರೈತರ ಮೇಲೆ ಪರಿಣಾಮ ಬೀರಲಿದೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಯೊಂದನ್ನು ಮಾಡಿದೆ. ಇನ್ಮುಂದೆ ಯಾವುದೇ ರೈತ ಪೋರ್ಟಲ್‌ಗೆ ಭೇಟಿ ನೀಡಲು ಮತ್ತು ಆಧಾರ್ ಸಂಖ್ಯೆಯಿಂದ ತನ್ನ ಸ್ಥಿತಿಯನ್ನು ಪರಿಶೀಲಿಸಲು ಸಾಧ್ಯವಿಲ್ಲ.